top of page
Writer's picturevishwa patha

77ನೇ ಸ್ವಾತಂತ್ರೋತ್ಸವ ದಿನಾಚರಣೆಗೆ ಮಾಣಿಕ್ ಷಾ ಪರೇಡ್ ತಯಾರಿ

Updated: Aug 15, 2023



ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸ್ವಾತಂತ್ರೋತ್ಸವ ಆಚರಣೆಗೆ ಮಾಣಿಕ್ ಷಾ ಪರೇಡ್ ಮೈದಾನ ಸಜ್ಜಾಗಿದ್ದು, ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲು ಪಥಸಂಚಲನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಕ್ಕಾಗಿ ಮೂರು ದಿನಗಳಿಂದ ತಾಲೀಮು ನಡೆಯುತ್ತಿದೆ. ಈ ಬಾರಿ ಬರೋಬ್ಬರಿ 8 ಸಾವಿರ ಮಂದಿ ಪಾಲ್ಗೊಳ್ಳಲಿದ್ದಾರೆ. ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತರು, ನಗರ ಪೊಲೀಸ್ ಆಯುಕ್ತರು, ನಗರ ಪೊಲೀಸ್ ಆಯುಕ್ತರು ಹಾಗೂ ನಗರ ಜಿಲ್ಲಾಧಿಕಾರಿ ಸೇರಿದಂತೆ ಸೇನಾ ಪಡೆಯ ಅಧಿಕಾರಿಗಳ ಉಪಸ್ಥಿತಿಯಲ್ಲಿ 38 ತುಕಡಿಗಳಿಂದ ಪಥಸಂಚಲನ ಹಾಗೂ ನಾಡಗೀತೆ, ರೈತಗೀತೆ ಹಾಗೂ ಮೋಟರ್ ಸೈಕಲ್ ಡಿಸ್ಟಲೇ ತಂಡದಿಂದ ಅಂತಿಮ ಹಂತದ ತಾಲೀಮು ನಡೆಯಿತು.


ಈ ಬಾರಿ 700 ಮಂದಿ ಶಾಲಾ ಮಕ್ಕಳಿಂದ ವೀರಭೂಮಿ, ವಿಧುರಾಶ್ವತ್ಥ ಧ್ವಜ ಸತ್ಯಾಗ್ರಹ ನಾಟಕ ಮೂಡಿಬರುತ್ತಿರುವುದು ವಿಶೇಷವಾಗಿದೆ. ಸಿದ್ಧತೆ ಕುರಿತು ಇಲ್ಲಿನ ಮಾಣಿಕ್ ಷಾ ಮೈದಾನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಬಿಬಿಎಂಪಿ ಹಾಗೂ ಬೆಂಗಳೂರು ನಗರ ಜಿಲ್ಲಾಡಳಿತ ವತಿಯಿಂದ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ನಡೆಸಲಾಗುತ್ತಿದ್ದು, ಆ.15ರ ಮಂಗಳವಾರ ಬೆಳಗ್ಗೆ 9ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ.


ಮಾಣೆಕ್ ಷಾ ಪರೇಡ್ ಮೈದಾನ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಭದ್ರತಾ ತಪಾಸಣೆ ನಡೆಸಲಾಗಿದ್ದು, ಮೈದಾನದ ಸಮೀಪದಲ್ಲಿರುವ ಎತ್ತರದ ಕಟ್ಟಡಗಳು, ಕಾಮಗಾರಿ ಸ್ಥಳಗಳನ್ನು ಪರಿಶೀಲನೆ ಮಾಡಲಾಗಿದೆ. ಜತೆಗೆ ನಗರದ 108 ಪೊಲೀಸ್ ಠಾಣೆಗಳ ಮೂಲಕ ಆಯಾ ವ್ಯಾಪ್ತಿಯಲ್ಲಿನ ರೈಲ್ವೆ ನಿಲ್ದಾಣ, ಹೋಟೆಲ್‍ಗಳು ಸೇರಿದಂತೆ ಎಲ್ಲೆಡೆಯೂ ಪರಿಶೀಲನೆ ನಡೆಸಲಾಗಿದೆ’ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಮಾಹಿತಿ ನೀಡಿದರು.


ಅಲ್ಲದೆ ಮೈದಾನದ ಬಂದೋಬಸ್ತ್ ಕರ್ತವ್ಯಕ್ಕೆ 10-ಕೆಎಸ್ರ್ಸಾಪಿ, ಸಿ.ಎ.ಆರ್. ತುಕಡಿಗಳನ್ನು, 2- ಅಗ್ನಿಶಾಮಕ ವಾಹನಗಳು, 2-ಆಂಬುಲೆನ್ಸ್ ವಾಹನಗಳು, 4-ಖಾಲಿ ವಾಹನಗಳು, 1-ಕ್ಷಿಪ್ರ ಕಾರ್ಯಾಚರಣೆ ಪಡೆ (ಕ್ಯೂಆರ್.ಟಿ) 1-ಡಿ-ಸ್ಪಾಟ್, 1-ಆರ್‍ಐವಿಗಳನ್ನು ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಒಂದು ಗರುಡ ಫೋರ್ಸ್, ಮೈದಾನದ ಸುತ್ತ ಎಲ್ಲ ಘಟನೆಗಳನ್ನು ಸೂಕ್ಷ್ಮವಾಗಿ ನಿಗಾವಹಿಸಲು 100 ಸಿಸಿಟಿವಿ ಕ್ಯಾಮರಾಗಳನ್ನು ಹಾಕಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದರು.


ಸಾರ್ವಜನಿಕರಿಗಾಗಿ 3 ಸಾವಿರ ಆಸನಗಳು, ಅತಿಗಣ್ಯರಿಗೆ 2 ಸಾವಿರ ಆಸನಗಳು, ಸ್ವಾತಂತ್ರ್ಯ ಹೋರಾಟಗಾರರು, ಗಣ್ಯರು, ರಕ್ಷಣಾ ಇಲಾಖೆ ಅಧಿಕಾರಿಗಳಿಗೆ 750 ಆಸನಗಳು, ಇತರೆ ಇಲಾಖೆ ಅಧಿಕಾರಿಗಳು, ನಿವೃತ್ತ ಸೇನಾಧಿಕಾರಿಗಳಿಗಾಗಿ 2 ಸಾವಿರ ಆಸನಗಳು ಸೇರಿದಂತೆ ಒಟ್ಟು ಎಂಟು ಸಾವಿರ ಮಂದಿಗೆ ಆಸನ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತುಷಾರ್ ಗಿರಿನಾಥ್ ತಿಳಿಸಿದರು.


ಈ ಸ್ಥಳಗಳಲ್ಲಿ ವಾಹನ ನಿಲುಗಡೆ ನಿಷೇಧ:

1.ಕಬ್ಬನ್ ರಸ್ತೆ, ಸಿಟಿಒ ವೃತ್ತ, ಕೆ.ಆರ್.ರಸ್ತೆ.

2.ಎಂ.ಜಿ.ರಸ್ತೆ, ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ರಸ್ತೆಯ ವರೆಗೆ.

3.ಸೆಂಟ್ರಲ್ ಸ್ಟ್ರೀಟ್, ಅನಿಲ್ ಕುಂಬ್ಳೆ ವೃತ್ತದಿಂದ ಶಿವಾಜಿ ನಗರ ಬಸ್ ನಿಲ್ದಾಣದ ವರೆಗೆ.


ಸಾಂಸ್ಕೃತಿಕ ಕಾರ್ಯಕ್ರಮ:

1.ಶಾಲಾ ಮಕ್ಕಳಿಂದ ವೀರ ನಮನ

2.ರೀಪದ ದೇವರಾಜ್ ಮತ್ತು ತಂಡದಿಂದ ನಾಡಗೀತೆ

3.ಶಾಲಾ ಮಕ್ಕಳಿಂದ ವೀರಭೂಮಿ, ವಿಧುರಾಶ್ವತ್ಥ ಧ್ವಜ ಸತ್ಯಾಗ್ರಹ ನಾಟಕ

4.ಶಾಲಾ ಮಕ್ಕಳಿಂದ ರೋಪ್ ಸ್ಕಿಪಿಂಗ್

5.ಕಲಾರಿಪಯಟ್ಟು

6.ಮೋಟರ್ ಸೈಕಲ್ ಪ್ರದರ್ಶನ



コメント


bottom of page