ಕೋಳಿ ಅಂಕಕ್ಕೆ ಅವಕಾಶವಿಲ್ಲ:ಮಂಗಳೂರು ಎಸ್.ಪಿ ರಿಷ್ಯಂತ್
- vishwa patha
- Jan 31, 2024
- 1 min read

ಮಂಗಳೂರು: ಕೋಳಿ ಅಂಕವು ಕಾನೂನುಬಾಹಿರ ಅಪರಾಧವಾಗಿದ್ದು, ಕೋಳಿ ಅಂಕವನ್ನು ನಡೆಸುವುದಕ್ಕಾಗಿ ಪೊಲೀಸ್ ಠಾಣೆಗಳಲ್ಲಿ ಅನುಮತಿ ನೀಡಲು ಕಾನೂನಿನಲ್ಲಿ ಯಾವುದೇ ಅವಕಾಶವಿರುವುದಿಲ್ಲ ಎಂದು ದ.ಕ. ಎಸ್.ಪಿ. ಸಿ.ಬಿ ರಿಷ್ಯಂತ್ ತಿಳಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿದ ಅವರು ಕೋಳಿ ಅಂಕ ನಡೆಸಲು ಕಾನೂನಿನಲ್ಲಿ ಯಾವುದೇ ಅವಕಾಶವಿರುವುದಿಲ್ಲ ಹಾಗಾಗಿ ಸಾರ್ವಜನಿಕರು ಕೋಳಿ ಅಂಕ ನಡೆಸಲು ಅನುಮತಿಗಾಗಿ ಪೊಲೀಸ್ ಠಾಣೆಗಳಿಗೆ ಮನವಿ ಸಲ್ಲಿಸಬಾರದು ಎಂದು ಹೇಳಿದರು. ಮುಂದಿನ ದಿನಗಳಲ್ಲಿ ಇಂತಹ ಅಕ್ರಮ ಚಟುವಟಿಕೆಗಳನ್ನು ನಡೆಸುವುದು ಕಂಡುಬಂದಲ್ಲಿ, ಅವರ ವಿರುದ್ಧ ಸೂಕ್ತ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
Comments