top of page
Writer's picturevishwa patha

ಹಿಮಾಚಲ ಪ್ರದೇಶದಲ್ಲಿ ಮೇಘ ಸ್ಫೊಟ: ಹಲವೆಡೆ ಭೂಕುಸಿತ, ವಾಹನ ಸಂಚಾರ ನಿರ್ಬಂಧ



ಶಿಮ್ಲಾ: ಹಿಮಾಚಲ ಪ್ರದೇಶದ ಸೋಲನ್‌ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಸಂಭವಿಸಿದೆ, ಇದರಿಂದಾಗಿ ಶಿಮ್ಲಾ–ಚಂಡೀಗಢ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಕಡಿತಗೊಂಡಿದೆ. ಈ ಮಾರ್ಗದಲ್ಲಿ ಬರುವ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ. ಮಂಡಿ ಜಿಲ್ಲೆಯೊಂದರಲ್ಲೇ 236, ಶಿಮ್ಲಾದಲ್ಲಿ 59 ಮತ್ತು ಬಿಲಾಸ್‌ಪುರ ಜಿಲ್ಲೆಯಲ್ಲಿ 40 ಸೇರಿದಂತೆ ಒಟ್ಟು 621 ರಸ್ತೆಗಳನ್ನು ಬಂದ್‌ ಮಾಡಲಾಗಿದೆ ಎಂದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಕಡಿತಗೊಂಡಿರುವುದರಿಂದ ಶಿಮ್ಲಾ ಮತ್ತು ಸೋಲನ್‌ ಜಿಲ್ಲೆಗಳಿಗೆ ಅಗತ್ಯ ಸರಕುಗಳ ರವಾನೆಗೆ ತೊಡಕುಂಟಾಗಿದೆ. ಸೇಬು ಮತ್ತಿತರ ಹಣ್ಣುಗಳಿರುವ ನೂರಾರು ಟ್ರಕ್‌ಗಳು ಮತ್ತು ಬಸ್‌ಗಳು ರಸ್ತೆಯ ಎರಡೂ ಬದಿಯಲ್ಲಿ ನಿಂತಿದ್ದು, ವಾಹನ ದಟ್ಟಣೆ ಉಂಟಾಗಿದ್ದು, ರಸ್ತೆ ದುರಸ್ತಿ ಕಾರ್ಯ ಪ್ರಗತಿಯಲ್ಲಿದೆ ಎಂದು ತಿಳಿದು ಬಂದಿದೆ.


ಕಳೆದ ಒಂದು ದಿನದಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಹಿಮ ನದಿಗಳು, ಕೆರೆಕಟ್ಟೆಗಳು ಉಕ್ಕಿ ಹರಿಯುತ್ತಿವೆ, ಉಕ್ಕಿ ಹರಿದ ನೀರಿನಿಂದ ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಐಎಸ್‌ಬಿಟಿ ಬಳಿ ಮರವೊಂದು ಉರುಳಿ ಬಿದ್ದು ಖಾಸಗಿ ಬಸ್‌ ಜಖಂಗೊಂಡಿದ್ದು, ಕಂಡಕ್ಟರ್ ಗಾಯಗೊಂಡಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಶಾಲಾ–ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ರಸ್ತೆ ದುರಸ್ತಿ ಕಾರ್ಯ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


Comments


bottom of page