HSRP ನಂಬರ್ ಪ್ಲೇಟ್ ಅಳವಡಿಸಿಕೊಳ್ಳದ ವಾಹನ ಸವಾರರಿಗೆ ಗುಡ್ನ್ಯೂಸ್
- vishwa patha
- Jun 19, 2024
- 1 min read
ಬೆಂಗಳೂರು, ಜೂನ್ 19: ಕರ್ನಾಟಕದಲ್ಲಿ ಹೈ ಸೆಕ್ಯುರಿಟಿ ನಂಬರ್ ಪ್ಲೇಟ್ (HSRP) ಅಳವಡಿಕೆಗೆ ಈಗಾಗಲೇ ಎರಡ್ಮೂರು ಬಾರಿ ಅವಧಿ ವಿಸ್ತರಣೆ ಮಾಡಿದ್ದು, ಜೂನ್ 12ಕ್ಕೆ ಡೆಡ್ಲೈನ್ ಕೊನೆಗೊಂಡಿದೆ. ಆದರೆ, ಕರ್ನಾಟಕ ಹೈಕೋರ್ಟ್ (Karnataka High Court) ಹೆಚ್ಎಸ್‌ಆರ್‌ಪಿ ಅಳವಡಿಸದವರ ವಿರುದ್ಧ ಜುಲೈ 4ರ ವರೆಗೆ ಯಾವುದೇ ಕ್ರಮಗಳನ್ನು ಕೈಗೊಳ್ಳದಂತೆ ರಾಜ್ಯ ಸರ್ಕಾರಕ್ಕೆ (Karnataka Government) ನಿರ್ದೇಶನ ನೀಡಿತ್ತು. ಅಲ್ಲದೆ, ಹೆಚ್‌ಎಸ್‌ಆರ್‌ಪಿ ಅಳವಡಿಕೆಯ ಗಡುವನ್ನು ವಿಸ್ತರಿಸಲು ಒಪ್ಪಿಗೆ ನೀಡಿತ್ತು. ಇದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಆಳವಡಿಕೆಗೆ ಸೆಪ್ಟೆಂಬರ್ 15ರ ವರೆಗೆ ಕಾಲಾವಕಾಶ ನೀಡಿದೆ.

ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ರಾಮಲಿಂಗಾ ರೆಡ್ಡಿ, ಸೆಪ್ಟೆಂಬರ್15 ವರಿಗೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಆಳವಡಿಕೆಗೆ ಡೆಡ್ಲೈನ್ ನೀಡಲಾಗಿದೆ. ಸೆಪ್ಟೆಂಬರ್ 15 ಬಳಿಕ ಅವಧಿ ವಿಸ್ತರಣೆ ಇಲ್ಲ. ಈಗಾಗಲೇ ಹಲವು ಬಾರಿ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಆಳವಡಿಕೆ ಗಡುವು ವಿಸ್ತರಣೆ ಮಾಡಿದ್ದೇವೆ, ಮತ್ತೆ ಗಡುವು ವಿಸ್ತರಣೆ ಮಾಡಲ್ಲ. ಸೆಪ್ಟೆಂಬರ್ 15ರೊಳಗೆ ವಾಹನಗಳಿಗೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಆಳವಡಿಸಿಕೊಳ್ಳಿ ಎಂದು ವಾಹನ ಸವಾರರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಮನವಿ ಮಾಡಿದರು.
Comments