ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಕಾರಣ 10 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ಮುಂದಿನ 10 ದಿನಗಳ ಕಾಲ ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿದಂತೆ ಉತ್ತರ ಕರ್ನಾಟಕದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಳಗಾವಿ, ಚಿಕ್ಕಮಗಳೂರು, ಬಾಗಲಕೋಟೆ, ಚಿಕ್ಕಮಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕೊಡಗು, ಮೈಸೂರು ಮತ್ತು ಮಂಡ್ಯ ಸೇರಿದಂತೆ ಕರಾವಳಿ ಪ್ರದೇಶದ ಕೆಲವು ಸ್ಥಳಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಕಳೆದೊಂದು ವಾರದಿಂದ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಗುಜರಾತ್ ಮತ್ತು ಮಹಾರಾಷ್ಟ್ರದಲ್ಲಿಯೂ ಸಹ ಸಾಕಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
コメント