top of page

ರಾಜ್ಯದ ಎಲ್ಲಾ ಟ್ರಕ್ಕಿಂಗ್‌ ಪಾಯಿಂಟ್‌ಗಳು ತಾತ್ಕಾಲಿಕ ಬಂದ್‌!

  • Writer: vishwa patha
    vishwa patha
  • Jan 31, 2024
  • 1 min read


ಬೆಂಗಳೂರು: ಆನ್‌ಲೈನ್‌ನಲ್ಲಿ ಅನುಮತಿ ಪಡೆಯದವರಿಗೆ ಚಾರಣಕ್ಕೆ ಅವಕಾಶ ನೀಡದಂತೆ ಅಧಿಕಾರಿಗಳಿಗೆ ಸಚಿವ ಈಶ್ವರ್ ಖಂಡ್ರೆ ಮಂಗಳವಾರ ಸೂಚನೆ ನೀಡಿದ್ದಾರೆ.


ಈ ಬಗ್ಗೆ ಮಂಗಳವಾರ ಅರಣ್ಯ ಇಲಾಖೆ ಸಚಿವ ಈಶ್ವರ್‌ ಖಂಡ್ರೆ ಅವರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಆದೇಶ ಹೊರಡಿಸಿದ್ದಾರೆ. ಟ್ರಕ್ಕಿಂಗ್‌ ಪಾಯಿಂಟ್‌ಗಳಲ್ಲಿ ಆನ್‌ಲೈನ್‌ ಬುಕ್ಕಿಂಗ್‌ ಆರಂಭವಾಗುವವರೆಗೂ ಹಾಗೂ ಸೂಕ್ತ ನಿಯಮಗಳನ್ನು (ಪ್ರಮಾಣಿಕ ಕಾರ್ಯವಿಧಾನ) ಜಾರಿಗೆ ತರುವವರೆಗೂ ಬಂದ್‌ ಮಾಡಬೇಕು ಎಂದು ಆದೇಶದಲ್ಲಿ ತಿಳಿಸಿದ್ದಾರೆ.


ಕಳೆದ ವಾರದ ಚಾರಣಿಗರ ಸಂಖ್ಯೆ ನೋಡಿ ಅಚ್ಛರಿಗೊಂಡ ಅರಣ್ಯ ಸಚಿವರು


“ಗಣರಾಜ್ಯೋತ್ಸವದ ದಿನ ಕುಮಾರಪರ್ವತಕ್ಕೆ ಸಾವಿರಾರು ಚಾರಣಿಗರು ಆಗಮಿಸಿದ್ದು ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದೆ. ಕೆಲವರು ಟೆಂಟ್ ಹಾಕಿ ರಾತ್ರಿ ಪರ್ವತದಲ್ಲಿ ಉಳಿಯುತ್ತಾರೆ ಎನ್ನಲಾಗಿದೆ. ಪರಿಸರ ತಜ್ಞರು ಅರಣ್ಯ ಉಳಿವಿನ ಬಗ್ಗೆ ತಮ್ಮ ಕಳಕಳಿ ಜೊತೆಗೆ ಆತಂಕ ವ್ಯಕ್ತಪಡಿಸಿದ್ದಾರೆ. ಈ ರೀತಿ ಸಾವಿರಾರು ಸಂಖ್ಯೆಯಲ್ಲಿ ಚಾರಣಕ್ಕೆ ಬರುವವರನ್ನು ನಿಯಂತ್ರಿಸುವುದು ಸವಾಲಿನ ಕೆಲಸವಾಗಿದೆ. ಜೊತೆಗೆ ಅವರ ತಪಾಸಣೆ ಮಾಡಿ ಬಿಡುವುದು ಅರಣ್ಯ ಇಲಾಖೆಯ ಸಿಬ್ಬಂದಿಗೂ ದೊಡ್ಡ ಸಮಸ್ಯೆಯಾಗಿದೆ. ಇದರಿಂದ ಪರಿಸರಕ್ಕೂ ಹಾಣಿಯಾಗುತ್ತಿದೆ. ಹೀಗಾಗಿ ಹೊಸ ಮಾರ್ಗಸೂಚಿ ಜಾರಿಯಾಗುವ ತನಕ ಬುಕ್ಕಿಂಗ್ ಇಲ್ಲದ ಚಾರಣವನ್ನು ಸರ್ಕಾರ ನಿಷೇಧಿಸಿದೆ” ಎಂದು ಸಚಿವರು ಟಿಪ್ಪಣಿಯಲ್ಲಿ ವಿವರಿಸಿದ್ದಾರೆ.


“ರಾಜ್ಯದ ಎಲ್ಲ ಚಾರಣ ತಾಣ (ಟ್ರಕ್ಕಿಂಗ್ ಪಾಯಿಂಟ್)ಗಳಲ್ಲೂ ಆನ್ ಲೈನ್ ಬುಕ್ಕಿಂಗ್ ವ್ಯವಸ್ಥೆ ಮತ್ತು ನಿರ್ದಿಷ್ಟ ಸಂಖ್ಯೆಗೆ ಸೀಮಿತಗೊಳಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಪ್ರಮಾಣಿತ ಕಾರ್ಯ ವಿಧಾನ ರೂಪಿಸುವವರೆಗೆ ಆನ್ ಲೈನ್ ಬುಕ್ಕಿಂಗ್ ಇಲ್ಲದ ಎಲ್ಲ ಚಾರಣ ತಾಣಗಳಲ್ಲಿ ತಾತ್ಕಾಲಿಕವಾಗಿ ಚಾರಣ ನಿರ್ಬಂಧಿಸುವಂತೆ ಸೂಚಿಸಿದ್ದಾರೆ.

ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯು ನಿರ್ವಹಿಸುವ ಟ್ರೆಕ್ಕಿಂಗ್ ಮಾರ್ಗಗಳಲ್ಲಿ 150 ಕ್ಕಿಂತ ಹೆಚ್ಚು ಜನರಿಗೆ ಅನುಮತಿ ನೀಡಲಾಗುವುದಿಲ್ಲ ಎಂದು ಸಚಿವರು ತಿಳಿಸಿದ್ದಾರೆ.

Comments


bottom of page