top of page
Writer's picturevishwa patha

ಸೆ.15 ರಿಂದ ಸೈಮಾ ಪ್ರಶಸ್ತಿ ಪ್ರದಾನ ಸಮಾರಂಭ



ದುಬೈ: ಪ್ರತಿಷ್ಠತ ಸೈಮಾ ಪ್ರಶಸ್ತಿ ಪ್ರದಾನ ಸಮಾರಂಭ ಸೆಪ್ಟಂಬರ್​ 15 ಮತ್ತು 16 ರಂದು ದುಬೈನಲ್ಲಿ ಹಮ್ಮಿಕೊಳ್ಳಲಾಗಿದೆ. ಸಮಾರಂಭದಲ್ಲಿ ನಟ, ನಟಿಯರು, ನಿರ್ದೇಶಕರು ಹಾಗೂ ತಂತ್ರಜ್ಞರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುತ್ತದೆ. ಕಳೆದ ಬಾರಿ ಬೆಂಗಳೂರಿನಲ್ಲಿ ಅದ್ಧೂರಿಯಾಗಿ ಸೈಮಾ ಪ್ರಶಸ್ತಿ ಪ್ರಧಾನ ಸಮಾರಂಭ ನಡೆದಿತ್ತು.


ದಕ್ಷಿಣ ಭಾರತ ಚಿತ್ರರಂಗದಲ್ಲಿ ಸಾಧನೆ ಮಾಡಿದವರನ್ನು ಗುರುತಿಸಿ ಸೈಮಾ ಪ್ರಶಸ್ತಿಯನ್ನು ನೀಡಲಾಗುತ್ತದೆ. ನಟನೆ, ನಿರ್ದೇಶನ, ನಿರ್ಮಾಣ, ಛಾಯಾಗ್ರಹಣ, ಸಾಹಿತ್ಯ ಹೀಗೆ ಎಲ್ಲಾ ವಿಭಾಗದಲ್ಲೂ ಪ್ರಶಸ್ತಿಯನ್ನು ಕೊಡಲಾಗುತ್ತದೆ. ಇದರ ಜೊತೆಗೆ ದಕ್ಷಿಣ ಭಾರತ ಚಿತ್ರರಂಗದಲ್ಲಿ ನಿರ್ಮಾಣವಾಗಿರುವ ಅತ್ಯುತ್ತಮ ಚಿತ್ರಗಳಿಗೂ ಸಹ ಪ್ರಶಸ್ತಿಗಳನ್ನು ನೀಡಲಾಗುತ್ತದೆ.


ಸೈಮಾ ಪ್ರಶಸ್ತಿ ಸಮಾರಂಭವನ್ನು ಕುರಿತು ಮಾತನಾಡಿದ ಬಹುಭಾಷಾ ನಟಿ ಶೃತಿ ಹಾಸನ್ “ಬೆಂಗಳೂರಿಗೆ ಮತ್ತೆ ಬಂದಿರುವುದು ಖುಷಿ ತಂದಿದೆ, ಸೈಮಾ ಪ್ರಶಸ್ತಿ ಪ್ರದಾನ ಮಾಡುವ ಮೂಲಕ ಚಿತ್ರರಂಗದ ಮಂದಿಯನ್ನು, ಪ್ರತಿಭಾವಂತರನ್ನು ಗೌರವಿಸುವ ಕೆಲಸ ಸೈಮಾ ಮುಂದುವರಿಸಲಿ” ಎಂದು ಶುಭಕೋರಿದರು. ಡಾಲಿ ಧನಂಜಯ್​ ಮಾತನಾಡಿ, ಕಳೆದ ಬಾರಿಯ ಸೈಮಾ ಅವಾರ್ಡ್ಸ್​ ಜೊತೆಗಿನ ಸುಂದರ ನೆನಪುಗಳನ್ನು ಮೆಲಕು ಹಾಕಿದರು.


ಸೈಮಾ ಅಧ್ಯಕ್ಷೆ ಬೃಂದಾ ಪ್ರಸಾದ್ ಮಾತನಾಡಿ, ಸತತ 11ನೇ ವರ್ಷದಿಂದ ಸೈಮಾ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗುತ್ತಿದೆ. ದಕ್ಷಿಣ ಭಾರತದಲ್ಲಿ ಪ್ರಶಸ್ತಿ ನೀಡುವಲ್ಲಿ ಮುಂಚೂಣಿಯಲ್ಲಿದ್ದೇವೆ. ಜಾಗತಿಕ ಮಟ್ಟದಲ್ಲಿ ದಕ್ಷಿಣ ಭಾರತದ ಸಿನಿಮಾಗಳನ್ನು ಗುರುತಿಸಿ ಪ್ರೋತ್ಸಾಹ ನೀಡುತ್ತಿರುವುದು ಹೆಮ್ಮೆಯ ವಿಚಾರ. ಈ ಬಾರಿ ಸೈಮಾ ಅದ್ಧೂರಿ ಪ್ರಶಸ್ತಿ ಪ್ರದಾನ ಸಮಾರಂಭ ದುಬೈನಲ್ಲಿ ನಡೆಯಲಿದೆ ಎಂದು ತಿಳಿಸಿದರು.

Comments


bottom of page