top of page
Writer's picturevishwa patha

ಗ್ರಾಮ ಪಂಚಾಯತಿಗಳಲ್ಲೂ ಸಿಗಲಿವೆ ಸರ್ಕಾರದ ಈ ಸೇವೆಗಳು! ಇನ್ನೂ ಮುಂದೆ ಬಾಪೂಜಿ ಕೇಂದ್ರದಲ್ಲೇ 66 ಸೇವೆಗಳು ಲಭ್ಯ


ಬೆಂಗಳೂರು: ಬಾಪೂಜಿ ಸೇವಾ ಕೇಂದ್ರ (Bapuji Service Center)ಗಳ ಮೂಲಕ ಈಗಾಗಲೇ ಒದಗಿಸುತ್ತಿರುವ 28 ಸೇವೆಗಳ ಜೊತೆಗೆ ಪ್ರಮುಖ ಇಲಾಖೆಗಳ 44 ಸರ್ಕಾರಿ ಸೇವೆಯನ್ನು ಪಡೆಯಬಹುದಾಗಿದೆ. ಈ ಮೂಲಕ 66 ಸೇವೆಗಳು ಬಾಪೂಜಿ ಸೇವಾ ಕೇಂದ್ರದಲ್ಲಿ ಲಭ್ಯವಾಗಲಿವೆ.


ವಿವಿಧ ಇಲಾಖೆಗಳ ಆನ್‌ಲೈನ್‌ ಸೇವೆಗಳಿಗಾಗಿ ನಗರ ಪ್ರದೇಶದ ಸೇವಾ ಕೇಂದ್ರ ಅಥವಾ ತಾಲೂಕು, ಉಪನೋಂದಣಿ ಕಚೇರಿಗೆ ಅಲೆಯಬೇಕಿತ್ತು. ಇದನ್ನು ತಪ್ಪಿಸುವ ನಿಟ್ಟಿನಲ್ಲಿ ಗ್ರಾಮಪಂಚಾಯಿತಿಗಳಲ್ಲಿರುವ ಬಾಪೂಜಿ ಸೇವಾ ಕೇಂದ್ರಗಳಲ್ಲಿಯೇ ಹಲವು ಹೊಸ ಸರ್ಕಾರಿ ಸೇವೆಗಳನ್ನು ಸೇರ್ಪಡೆ ಮಾಡಲಾಗಿದೆ.


ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಈ ಸೇವೆಗಳಿಗೆ ಚಾಲನೆ ನೀಡಿದ್ದು, ಗ್ರಾಮೀಣ ಜನತೆ ಹಲವು ಹೊಸ ಸೌಲಭ್ಯಗಳನ್ನು ಬಳಸಿಕೊಳ್ಳಲು ಸಚಿವ ಪ್ರಿಯಾಂಕ್ ಖರ್ಗೆ ಮನವಿ ಮಾಡಿದರು, ಬಹುತೇಕ ಸರ್ಕಾರಿ ಸೇವೆಗಳು ಒಂದೇ ಸೂರಿನಡಿ ಲಭ್ಯವಾಗುವುದರಿಂದ ಬೇರೆ ಬೇರೆ ಇಲಾಖೆಗಳ ಸರ್ಕಾರಿ ಕಚೇರಿಗಳಿಗೆ ಹೋಗುವ ಅವಶ್ಯಕತೆ ಕಡಿಮೆಯಾಗಲಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.




ಯಾವೆಲ್ಲಾ 5 ಇಲಾಖೆ ಸೇವೆಗಳು ಲಭ್ಯ?


ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಯಿತಿ ರಾಜ್ ಇಲಾಖೆಯ ಸೇವೆಗಳ ಜೊತೆಯಲ್ಲಿ ಇನ್ನು ಮುಂದೆ ಸಾರ್ವಜನಿಕರಿಗೆ ಕಂದಾಯ, ಕಾರ್ಮಿಕ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಇಂಧನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸೇವೆಗಳನ್ನು ಪಡೆಯಬಹುದಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.


ಪ್ರತಿಯೊಂದು ಹೋಬಳಿಯು ಆರರಿಂದ ಏಳು ಗ್ರಾಮ ಪಂಚಾಯಿತಿಗಳನ್ನು ಹೊಂದಿದ್ದು, ಈ ವ್ಯಾಪ್ತಿಯ 20 ಸಾವಿರದಿಂದ 50 ಸಾವಿರ ಜನರು ವಿವಿಧ ಸರ್ಕಾರಿ ಸೇವೆಗಳನ್ನು ಪಡೆಯಲು ಹೋಬಳಿ ಕೇಂದ್ರಕ್ಕೆ ಹೋಗಬೇಕಾಗಿತ್ತು. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗಿತ್ತು. ಈ ಸಮಸ್ಯೆ ನಿವಾರಿಸಲು 44 ಸೇವೆ ಆರಂಭಿಸಲಾಗಿದೆ ಎಂದು ಹೇಳಿದೆ.


ಯಾವ ಸೇವೆಗಳು ಲಭ್ಯ?


ಸಣ್ಣ ಮತ್ತು ಅತಿ ಸಣ್ಣ ಹಿಡುವಳಿದಾರ ಪ್ರಮಾಣ ಪತ್ರ, ಕೃಷಿ ಕಾರ್ಮಿಕ ಪ್ರಮಾಣ ಪತ್ರ, ಭೂ ಹಿಡುವಳಿ ಪ್ರಮಾಣ ಪತ್ರ, ಬೋನಪೈಡ್ ದೃಢೀಕರಣ ಪತ್ರ, ಜನಸಂಖ್ಯಾ ಪ್ರಮಾಣ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಜಾತಿ ಪ್ರಮಾಣ (ಪ್ರವರ್ಗ-ಎ), ಜಾತಿ ಪ್ರಮಾಣ ಪತ್ರ (ಅ.ಜಾ/ಅ.ಪಂ), ಹಿಂದುಳಿದ ವರ್ಗ ಪ್ರಪತ್ರ (ಕೇ.ಸ), ವಾಸ ಸ್ಥಳ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ವಿಧವಾ ದೃಢೀಕರಣ ಪತ್ರ, ಜೀವಂತ ದೃಢೀಕರಣ ಪತ್ರ, ವ್ಯವಸಾಯಗಾರರ ಕುಟುಂಬದ ದೃಢೀಕರಣ ಪತ್ರ, ಮರುವಿವಾಹವಾಗದಿರುವ ಬಗ್ಗೆ ದೃಢೀಕರಣ ಪತ್ರ, ಜಮೀನು ಇಲ್ಲದಿರುವ ಬಗ್ಗೆ ದೃಢೀಕರಣ ಪತ್ರ.


ಮೃತರ ಕುಟುಂಬ ಸದಸ್ಯರ ದೃಢೀಕರಣ ಪತ್ರ, ನಿರುದ್ಯೋಗಿ ದೃಢೀಕರಣ ಪತ್ರ, ಸರ್ಕಾರಿ ನೌಕರಿ ಇಲ್ಲದಿರುವ ಬಗ್ಗೆ ಪ್ರಮಾಣ ಪತ್ರ, ವ್ಯವಸಾಯಗಾರ ದೃಢೀಕರಣ ಪತ್ರ, ಸಣ್ಣ ಮತ್ತು ಅತಿ ಸಣ್ಣ ಹಿಡುವಳಿದಾರ ಪ್ರಮಾಣ ಪತ್ರ, ಬೋನಫೈಡ್ ದೃಢೀಕರಣ ಪತ್ರ, ಸಾಲ ತೀರಿಸುವ ಶಕ್ತಿ ಪ್ರಮಾಣ ಪತ್ರ, ನಿವಾಸಿ ಪ್ರಮಾಣ ಪತ್ರ, ಆದಾಯ ದೃಢೀಕರಣ ಪತ್ರ (ಉದ್ಯೋಗದ ಸಲುವಾಗಿ ಮಾತ್ರ), ಆದಾಯ ದೃಢೀಕರಣ ಪತ್ರ (ಅನುಕಂಪದ ಆಧಾರದ ನೇಮಕಾತಿಗೆ), ಕುಟುಂಬ ವಂಶವೃಕ್ಷ ದೃಢೀಕರಣ ಪತ್ರ.

Comments


bottom of page