ಶಿವಮೊಗ್ಗ: ರಾಗಿಗುಡ್ಡದಲ್ಲಿ ಭಾನುವಾರ ರಾತ್ರಿ ನಡೆದ ಈದ್ ಮಿಲಾದ್ ಮೆರವಣಿಗೆ ಸಮಯದಲ್ಲಿ ಮುಸ್ಲಿಂ ಯುವಕನನ್ನು ಪೊಲೀಸರು ಕೊಂದಿದ್ದಾರೆ ಎಂಬ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ, ಆದರೆ ಅದು ಸುಳ್ಳು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಹೇಳಿದ್ದಾರೆ.
ರಾಗಿಗುಡ್ಡದಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ಅಪಪ್ರಚಾರಕ್ಕೆ ಕಿವಿಗೊಡಬೇಡಿ. ಪೊಲೀಸರಿಂದ ಎನ್‌ಕೌಂಟರ್ ಎಂದು ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಸುಳ್ಳು ಸುದ್ದಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದವರ ವಿರುದ್ಧ ಈಗಾಗಲೇ ಎಫ್ಐಆರ್ ದಾಖಲಾಗಿದೆ ಎಂದು ಜಿ.ಕೆ.ಮಿಥುನ್ ಕುಮಾರ್ ತಿಳಿಸಿದರು.
ಗಲಭೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ. ಗಾಯಗೊಂಡವರನ್ನು ಈಗಾಗಲೇ ಆಸ್ಪತ್ರೆಗೆ ದಾಖಲಿಸಲಾಗಿದೆ, ಒಟ್ಟು 12 ಜನ ಚಿಕಿತ್ಸೆ ಪಡೆಯುತ್ತಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು‘ ಎಸ್ಪಿ ಹೇಳಿದರು. ಘಟನೆಗೆ ಸಂಬಂಧಿಸಿದಂತೆ 60 ಜನರನ್ನು ಬಂಧಿಸಲಾಗಿದೆ. ಮತ್ತು ಕೆಲವು ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ‘ ಎಂದು ಮಿಥುನ್ ಮಾಹಿತಿ ನೀಡಿದರು.
Comments