top of page
Writer's picturevishwa patha

ನಮ್ಮ ತ್ರಿವರ್ಣ ಧ್ವಜದ ಬಗ್ಗೆ ಎಲ್ಲರೂ ತಿಳಿಯಬೇಕಾದ ವಿಷಯಗಳು


ಭಾರತದಾದ್ಯಂತ 77ನೇ ಸ್ವಾತಂತ್ರ್ಯೋತ್ಸವ ಸಂಭ್ರಮ ಕಳೆಗಟ್ಟಿದೆ. ಬ್ರಿಟಿಷ್ ಆಡಳಿತದಿಂದ ಮುಕ್ತಿ ಪಡೆದ ದಿನವನ್ನು ದೇಶಾದ್ಯಂತ ಪ್ರತಿ ವರ್ಷ ಆಗಸ್ಟ್ 15 ರಂದು ಸಂಭ್ರಮದಿಂದ ಆಚರಿಸಲಾಗುತ್ತದೆ. ದೇಶದಕ್ಕಾಗಿ ಪ್ರಾಣ ತ್ಯಾಗ ಮಾಡಿದ ಮಹನೀಯರನ್ನು ಸಹ ಸ್ಮರಿಸಿ ಭಾರತೀಯರು ಸ್ವಾತಂತ್ರ್ಯ ದಿನವನ್ನು ಆಚರಿಸುತ್ತಾರೆ.


ಭಾರತದ ಸ್ವಾತಂತ್ರ್ಯ ಹೋರಾಟದ ಸಂಗತಿಗಳು ಮತ್ತು ಸ್ವಾತಂತ್ರ್ಯ ಹೋರಾಟಗಾರರ ವೀರೋಚಿತ ಪ್ರಯತ್ನಗಳ ನಡುವೆ, ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ಸ್ವಾತಂತ್ರ್ಯದ ಪ್ರಯಾಣದ ಬಗ್ಗೆ ಆಕರ್ಷಕವಾದ ಸಂಗತಿಗಳು ಅಡಗಿವೆ. ದೇಶದ ಸ್ವಾತಂತ್ರ್ಯಕ್ಕೆ ದಾರಿಮಾಡಿಕೊಟ್ಟ ತ್ಯಾಗ ಮತ್ತು ಶೌರ್ಯದ ಕಥೆಗಳು ನಮಗೆ ತಿಳಿದಿರುವಾಗ, ನಮ್ಮ ಹೆಮ್ಮೆಯ ತ್ರಿವರ್ಣ ಧ್ವಜದ ಬಗ್ಗೆ ಆಸಕ್ತಿದಾಯಕ ಸಂಗತಿಗಳು ಸಹ ತಿಳಿದುಕೊಳ್ಳಬೇಕಾಗಿರುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯಕೊಡ.


ತ್ರಿವರ್ಣ ಧ್ವಜದ ವೈಶಿಷ್ಟ್ಯ


ತ್ರಿವರ್ಣ ಧ್ವಜ ಅಗಲದುದ್ದಕ್ಕೂ ಮೇಲೆ ಕೇಸರಿ ಬಣ್ಣ, ಮಧ್ಯದಲ್ಲಿ ಬಿಳಿ ಬಣ್ಣ, ಕೊನೆಯಲ್ಲಿ ಹಸಿರು ಬಣ್ಣದ ಪಟ್ಟಿಗಳಿಂದ ಕೂಡಿದೆ. ಬಾವುಟದ ಮಧ್ಯದಲ್ಲಿ ಇಪ್ಪತ್ತುನಾಲ್ಕು ರೇಖೆಗಳುಳ್ಳ ನೀಲಿಯ ಅಶೋಕ ಚಕ್ರವಿದೆ. ದೇಶದ ವಿಭಿನ್ನ ಜಾತಿ, ಮತ, ಪಂಗಡ ಮತ್ತು ಸಂಸ್ಕೃತಿಯ ಜನರನ್ನು ಒಂದೇ ದ್ವಜದಡಿ ನಿಲ್ಲಿಸಿ ದೇಶದ ಏಕತೆಯನ್ನು ಸಾರುವ ದಿವ್ಯ ಸಾಧನವೇ ನಮ್ಮ ರಾಷ್ಟ್ರದ್ವಜ.


ಅಂದಿನ ಪ್ರಧಾನಿಯಾಗಿದ್ದ ಜವಾಹರ‌ಲಾಲ್ ನೆಹರು ೧೯೪೭ ಜುಲೈ ೨೨ ರಂದು ಅಸೆಂಬ್ಲಿಯಲ್ಲಿ ನಮ್ಮ ರಾಷ್ಟ್ರ ದ್ವಜವನ್ನು ದೇಶಕ್ಕೆ ಅರ್ಪಿಸಿದರು. ನಮ್ಮ ಸರಕಾರವು ದ್ವಜ ಕೇವಲ ಕೈ ನೇಯ್ಗೆಯಿಂದಲೇ ಸಿದ್ದವಾದ ಶುದ್ಧ ಖಾದಿಯಿಂದಲೇ ಮಾಡಲ್ಪಟ್ಟಿರಬೇಕು. ಅದು ಉಣ್ಣೆಯ ಅಥವಾ ರೇಷ್ಮೆಯ ಇಲ್ಲವೇ ಹತ್ತಿಯದಾದರೂ ಅಡ್ಡಿಯಿಲ್ಲ.


ರಾಷ್ಟ್ರಧ್ವಜ ಕರ್ನಾಟಕದ ಧಾರವಾಡ ಜಿಲ್ಲೆಯ ಗರಗ ಗ್ರಾಮದಲ್ಲಿ ತಯಾರಿಸಲಾಗುತ್ತದೆ. ಉತ್ತರ ಕರ್ನಾಟಕದಾದ್ಯಂತ ಒಟ್ಟು ೫೨ ಘಟಕಗಳು ರಾಷ್ಟ್ರಧ್ವಜ ನಿರ್ಮಾಣದಲ್ಲಿ ತೊಡಗಿವೆ. ಭಾರತದ ಸಂವಿಧಾನದಲ್ಲಿ ಉಲ್ಲೇಖದಂತೆ ಮತ್ತು ಭಾರತೀಯ ಸ್ಟಾಂಡರ್ಡ್ಸ್ ಬ್ಯೂರೋದ ನಿಯಮಗಳಿಗೆ ತಕ್ಕಂತೆ ರಾಷ್ಟ್ರಧ್ವಜವನ್ನು ಉತ್ಪಾದಿಸಲಾಗುತ್ತದೆ.


ತ್ರಿವರ್ಣ ಧ್ವಜದ ಬಗ್ಗೆ ನೀವು ತಿಳಿದುಕೊಳ್ಳಬೇಕಾದ ಪ್ರಮುಖ ವಿಷಯಗಳು


  • ಆಂಧ್ರಪ್ರದೇಶದ ಸ್ವಾತಂತ್ರ್ಯ ಹೋರಾಟಗಾರ ಪಿಂಗಲಿ ವೆಂಕಯ್ಯ ಅವರು ಭಾರತದ ತ್ರಿವರ್ಣ ಧ್ವಜವನ್ನು ವಿನ್ಯಾಸಗೊಳಿಸಿದ್ದರು. 1923ರಲ್ಲಿ ವೆಂಕಯ್ಯ ಅವರು ತಾವು ವಿನ್ಯಾಸಗೊಳಿಸಿದ ಧ್ವಜವನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ಗೆ ಕೊಟ್ಟರು, ಮುಂದೆ ಇದೆ ನಮ್ಮ ಭಾರತದ ತ್ರಿವರ್ಣ ಧ್ವಜವಾಯಿತು. ಇದನ್ನು ಜುಲೈ 22, 1947 ರಂದು ಭಾರತದ ರಾಷ್ಟ್ರಧ್ವಜವಾಗಿ ಅಳವಡಿಸಿಕೊಳ್ಳಲಾಯಿತು.


  • ನಮ್ಮ ಧ್ವಜದಲ್ಲಿರುವ ಕೇಸರಿ ಬಣ್ಣವು ಭಾರತೀಯ ಜನರ ತ್ಯಾಗ, ಧೈರ್ಯ ಮತ್ತು ಆತ್ಮವನ್ನು ಪ್ರತಿನಿಧಿಸಿದರೆ, ಬಿಳಿ ಬಣ್ಣವು ಶಾಂತಿ, ಸತ್ಯ ಮತ್ತು ಶುದ್ಧತೆಯನ್ನು ಪ್ರತಿನಿಧಿಸುತ್ತದೆ. ಹಸಿರು ಬಣ್ಣವು ಸಮೃದ್ಧಿ, ಬೆಳವಣಿಗೆ ಮತ್ತು ಫಲವತ್ತತೆಯನ್ನು ಸಾರುವುದರ ಮೂಲಕ ನಮ್ಮ ದೇಶವನ್ನು ಪ್ರತಿನಿಧಿಸುತ್ತದೆ.


  • ಧ್ವಜದ ಮಧ್ಯದಲ್ಲಿರುವ ಅಶೋಕ ಚಕ್ರದ ಕಡ್ಡಿಗಳು ದಿನದ ಇಪ್ಪತ್ನಾಲ್ಕು ಗಂಟೆಗಳನ್ನು ಪ್ರತಿನಿಧಿಸುವುದರಿಂದ ಈ ಚಕ್ರವನ್ನು 'ಸಮಯದ ಚಕ್ರ' ಎಂದೂ ಕೂಡಾ ಕರೆಯಲಾಗುತ್ತದೆ. ಅಶೋಕ ಚಕ್ರವನ್ನು ಜೈನ ಧರ್ಮ, ಹಿಂದೂ ಧರ್ಮ ಮತ್ತು ಬೌದ್ಧ ಧರ್ಮದ ಧಾರ್ಮಿಕ ಸೂಚಕವಾಗಿ ರೂಪಿಸಲಾಗಿದೆ.


  • ಅಶೋಕ ಚಕ್ರದ ಕಡ್ಡಿಗಳು ಧೈರ್ಯ, ತಾಳ್ಮೆ, ಸ್ವಯಂ ತ್ಯಾಗ, ಸತ್ಯತೆ, ಸದಾಚಾರ, ಪ್ರೀತಿ, ಆಧ್ಯಾತ್ಮಿಕ ಜ್ಞಾನ, ನೈತಿಕತೆ, ಕಲ್ಯಾಣ, ಉದ್ಯಮ, ಸಮೃದ್ಧಿ ಮತ್ತು ನಂಬಿಕೆಯಂತಹ ತತ್ವಗಳನ್ನು ಪ್ರತಿನಿಧಿಸುತ್ತವೆ.

  • ಧ್ವಜದ ಅಗಲ ಮತ್ತು ಅದರ ಉದ್ದದ ಅನುಪಾತವು 2:3 ಆಗಿದೆ. ಕೇಸರಿ ಮತ್ತು ಹಸಿರು ಪಟ್ಟಿಗಳು ಬಿಳಿ ಪಟ್ಟಿಗಿಂತ ಎರಡು ಪಟ್ಟು ಅಗಲವಾಗಿರುತ್ತದೆ.


  • ಮಾಜಿ ರಾಷ್ಟ್ರಪತಿ ಅಥವಾ ಪ್ರಧಾನ ಮಂತ್ರಿಯ ಮರಣದಂತಹ ಸಂದರ್ಭಗಳಲ್ಲಿ ಹಾಗೂ ರಾಷ್ಟ್ರೀಯ ಶೋಕಾಚರಣೆಯ ದಿನಗಳಲ್ಲಿ ಧ್ವಜವನ್ನು ಅರ್ಧಮಟ್ಟಕ್ಕೆ ಹಾರಿಸಲಾಗುತ್ತದೆ. ಮಹಾತ್ಮಾ ಗಾಂಧಿ ಹತ್ಯೆಯ ದಿನವಾದ ಜನವರಿ ೩೦ರಂದು ಪ್ರತಿ ವರ್ಷ ಧ್ವಜವನ್ನು ಅರ್ಧಕ್ಕೆ ಹಾರಿಸಲಾಗುತ್ತದೆ.


  • ನಮ್ಮ ದೇಶದ ಧ್ವಜವನ್ನು ನೆಲಕ್ಕೆ ಮುಟ್ಟಲು ಬಿಡುವುದಿಲ್ಲ. ಭಾರತೀಯ ಧ್ವಜವನ್ನು ಯಾವುದೇ ರೀತಿಯಲ್ಲಿ ಅಪವಿತ್ರಗೊಳಿಸುವುದು ಕಾನೂನುಬಾಹಿರವಾಗಿದೆ. ಧ್ವಜವನ್ನು ಸುಡುವುದು, ತುಳಿಯುವುದು ಅಥವಾ ಹರಿದು ಹಾಕುವುದನ್ನು ಅಪರಾಧ, ಧ್ವಜವನ್ನು ಅಪವಿತ್ರಗೊಳಿಸಿದವರಿಗೆ ಮೂರು ವರ್ಷಗಳವರೆಗೆ ಜೈಲು ಶಿಕ್ಷೆಗೆ ಗುರಿಪಡಿಸಬಹುದು.


  • ಭಾರತೀಯ ಧ್ವಜವು ರಾಷ್ಟ್ರೀಯ ಹೆಮ್ಮೆ ಮತ್ತು ಏಕತೆಯ ಸಂಕೇತವಾಗಿದೆ. ಇದು ಭಾರತದ ಸ್ವಾತಂತ್ರ್ಯವನ್ನು ಸಾಧಿಸಲು ಮಾಡಿದ ತ್ಯಾಗವನ್ನು ನೆನಪಿಸುತ್ತದೆ.

  • ಭಾರತೀಯ ಧ್ವಜವು ಭಾರತೀಯ ಜನರಿಗೆ ಸ್ಫೂರ್ತಿಯ ಮೂಲವಾಗಿದೆ. ಭಾರತದ ಎಲ್ಲಾ ಸರ್ಕಾರಿ ಕಟ್ಟಡಗಳು ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಭಾರತೀಯ ಧ್ವಜವನ್ನು ಹಾರಿಸಲಾಗುತ್ತದೆ.


  • ನಮ್ಮ ಧ್ವಜವು ದೇಶದ ಇತಿಹಾಸ ಮತ್ತು ಸಂಸ್ಕೃತಿಯನ್ನು ನೆನಪಿಸುವುದುರ ಜೊತೆಗೆ ದೇಶಕ್ಕೆ ಉತ್ತಮ ಭವಿಷ್ಯವನ್ನು ನಿರ್ಮಿಸಲು ಒಟ್ಟಾಗಿ ಕೆಲಸ ಮಾಡಲು ಪ್ರೇರೇಪಿಸುತ್ತದೆ.


  • ಧ್ವಜದ ಪ್ರದರ್ಶನ ಮತ್ತು ಬಳಕೆಯನ್ನು ಧ್ವಜ ಸಂಹಿತೆ, 2002ನಿಂದ ನಿಯಂತ್ರಿಸಲಾಗುತ್ತದೆ.

  • ದ್ವಜವನ್ನು ಶೀಘ್ರಗತಿಯಲ್ಲಿ ಏರಿಸಬೇಕು ಮತ್ತು ಇಳಿಸುವಾಗ ನಿದಾನಗತಿಯಲ್ಲಿ ಇಳಿಸಬೇಕು. ಸೂರ್ಯೋದಯದಿಂದ ಹಿಡಿದು ಸೂರ್ಯಾಸ್ತದ ತನಕ ಮಾತ್ರ ಹಾರಿಸಬೇಕು.

  • ರಾಷ್ಟ್ರ ದ್ವಜವನ್ನು ಕೆಲವು ಕಡೆ ಎಲ್ಲ ದಿನಗಳಲ್ಲೂ, ಇನ್ನು ಕೆಲವು ಕಡೆ ಕೇವಲ ವಿಶೇಷ ದಿನಗಳಲ್ಲಿ ಮಾತ್ರ ಹಾರಿಸಲಾಗುತ್ತದೆ.

  • ಸ್ವಾತಂತ್ರೋತ್ಸವ, ಗಣರಾಜ್ಯೋತ್ಸವ ಮತ್ತು ಗಾಂಧಿಜಯಂತಿ ಹಾಗೂ ರಾಷ್ಟ್ರೀಯ ವಿಶೇಷ ದಿನಗಳ ಜೊತೆಗೆ ಸರಕಾರದ ನಿರ್ದೇಶನದ ಮೇರೆಗೆ ರಾಷ್ಟ್ರಮಟ್ಟದ ಆಚರಣೆಯ ಸಂದರ್ಭಗಳಲ್ಲಿ ರಾಷ್ಟ್ರದ್ವಜವನ್ನು ಹಾರಿಸಬಹುದು.


  • ಧ್ವಜ ಏರಿಸುವಾಗ ಧ್ವಜದ ಹಸಿರು ಬಣ್ಣ ಕೆಳಗೆ ಇರುವಂತೆ ಕೇಸರಿ ಬಣ್ಣ ಮೇಲೆ ಇರುವಂತೆ ಹಾರಿಸತಕ್ಕದ್ದು.


  • ಹವಾಮಾನದ ವೈಪರೀತ್ಯದಿಂದ ಧ್ವಜವು ಹಾಳಾಗದಂತೆ ಧ್ವಜವನ್ನು ಕಾಪಾಡಬೇಕು.


  • ವೇದಿಕೆಯ ಮೇಲೆ ಬಳಸುವಂತಿದ್ದಲ್ಲಿ ಸಭಿಕರ ಎದುರಿಗೆ ನಿಂತು ಭಾಷಣ ಮಾಡುವವರ ಬಲಕ್ಕೆ ಧ್ವಜ ಹಾರಿಸತಕ್ಕದು.


  • ಸಮ್ಮೇಳನಗಳು ಇತರ ಕಾರ್ಯಕ್ರಮಗಳು ನಡೆಯುವಾಗ ವೇದಿಕೆಯ ಮೇಲಿರುವ ಅಧ್ಯಕ್ಷ ಸ್ಥಾನಕ್ಕಿಂತ ಎತ್ತರದಲ್ಲಿ ನಮ್ಮ ರಾಷ್ಟ್ರದ್ವಜ ಹಾರಾಡತಕ್ಕದ್ದು.


  • ಶಾಲೆ ಕಾಲೇಜುಗಳು, ಕ್ರೀಡಾ ಶಿಬಿರಗಳು, ಸ್ಕೌಟ್ಸ್ ಶಿಬಿರಗಳು ನಂತರ ವಿಶೇಷ ಸಂದರ್ಭಗಳಲ್ಲಿ ಮಕ್ಕಳ ಮನಸ್ಸಿನಲ್ಲಿ ವಿಶೇಷ ಗೌರವ ಮೂಡಿಸಲು ರಾಷ್ಟ್ರದ್ವಜ ಹಾರಿಸಬಹುದು.


  • ನಮ್ಮ ಪವಿತ್ರ ಭಾರತಾಂಬೆಯ ಕೀರ್ತಿಯು ಮುಗಿಲೆತ್ತರಕ್ಕೆ ಏರಲಿ, ಎಲ್ಲಕ್ಕಿಂತ ಶ್ರೇಷ್ಠವಾದ ನಮ್ಮ ರಾಷ್ಟ್ರದ ಧ್ಯೇಯೋದ್ದೇಶಗಳು ಎಲ್ಲಕ್ಕಿಂತ ಎತ್ತರದಲ್ಲಿ ರಾರಾಜಿಸಲಿ, ಎಂಬ ಸಂಕೇತವನ್ನು ನಾಲ್ಕು ದಿಕ್ಕುಗಳಿಗೂ ತಿಳಿಯಪಡಿಸುವುದೇ ನಮ್ಮ ರಾಷ್ಟ್ರ ಧ್ವಜವನ್ನು ಮೇಲಕ್ಕೆ ಹಾರಿಸುವ ಉದ್ದೇಶ.


Kommentare


bottom of page