ಚಿಕ್ಕಮಗಳೂರು: ಮಲೆನಾಡಿನಲ್ಲಿ ಕಳೆದೆರಡು ದಿನಗಳಿಂದ ಮಳೆಯ ಪ್ರಮಾಣ ತಗ್ಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಪ್ರವಾಸಿ ತಾಣಗಳಾಗಿರುವ ಮುಳ್ಳಯ್ಯನಗಿರಿ, ದತ್ತಪೀಠ ಸೇರಿದಂತೆ ಗಿರಿ ಪ್ರದೇಶಗಳ ವೀಕ್ಷಣೆಗೆ ಜಿಲ್ಲಾಡಳಿತ ವಿಧಿಸಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ. ಕೆಲ ದಿನಗಳ ಹಿಂದೆ ಮುಳ್ಳಯ್ಯನ ಗಿರಿ ಸಾಲಿನಲ್ಲಿ ಧರೆ ಕುಸಿತ ಸಂಭವಿಸಿತ್ತು.
ಈ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳ ಕಾಲ ಮುಳ್ಳಯ್ಯನಗಿರಿ, ದತ್ತಪೀಠ ಸೇರಿದಂತೆ ಗಿರಿ ಪ್ರದೇಶಗಳಿಗೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿತ್ತು. ಇದೀಗ ಮಳೆ ತಗ್ಗಿರುವುದರಿಂದ ಇಂದು (ಜು.31) 11 ಗಂಟೆಯಿಂದ ಈ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ತೆರಳಿ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ.
Comments